ಬಿ.ವೈ ವಿಜಯೇಂದ್ರ ಅವರು 2024ರ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ತಮ್ಮ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟವನ್ನು ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಲೋಕಸಭಾ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನನ್ನ ಗೆಲುವು ಇಡೀ ರಾಜ್ಯದಲ್ಲೆಲ್ಲಾ ಚರ್ಚೆಯಾಗಲಿದೆ. ನನ್ನ ಪುತ್ರನನ್ನು ಎಂಎಲ್ಸಿ ಮಾಡ್ತೀವಿ ಅಂದಿದ್ದರು, ನನ್ನ ರಾಜ್ಯಪಾಲರನ್ನಾಗಿ ಮಾಡ್ತೀವಿ ಅಂದಿದ್ದರು. ಆದ್ರೇ ಈಗ ನನಗೆ ಯಾವುದು ಬೇಡ. ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಘೋಷಣೆಯಾದ ಬಳಿಕ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರ ಹುದ್ದೆ ಕಳೆದುಕೊಳ್ಳುತ್ತಾರೆ. ಇದರಲ್ಲಿ ಎರಡು ಮಾತಿಲ್ಲ ಎಂಬುದಾಗಿ ಭವಿಷ್ಯ ನುಡಿದರು. ಕೆ.ಎಸ್ ಈಶ್ವರಪ್ಪ ಅವರ ಈ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾನು ಮಾಜಿ ಸಚಿವ ಈಶ್ವರಪ್ಪ ರವರ ಹೇಳಿಕೆಗೆ ಸದ್ಯ ಏನನ್ನೂ ಪ್ರತಿಕ್ರಿಯಿಸುವುದಿಲ್ಲಾ ಅಂತ ಹೇಳಿದರು.
ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ವರುಣ್ ಧವನ್, ರಿಷಬ್ ಶೆಟ್ಟಿ!
ಕಾಂತಾರ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ರಿಷಬ್ ಶೆಟ್ಟಿ, ನಿನ್ನೆಯ ಅಮೆಜಾನ್ ಪ್ರೈಂ ವಿಡಿಯೋ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದರು. ಸೌತ್ & ನಾರ್ತ್ ಇಂಡಿಯಾ...
Discussion about this post